ದೆಹಲಿ: ಡೆಹ್ರಾಡೂನ್ ಬಳಿ ಬಸ್ಸೊಂದು ಸುಮಾರು 300 ಅಡಿ ಪ್ರಪಾತಕ್ಕೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ದೇಶಕಂಡ ಈ ಮತ್ತೊಂದು ಭೀಕರ ಅಪಘಾತದಲ್ಲಿ 14 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಚಕ್ರತಾ ಎಂಬಲ್ಲಿ ಭಾನುವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಯೋಧರು ರಕ್ಷಣಾ ಕಾರ್ಯ ಕೈಗೊಂಡರು.
ಈ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅಪಘಾತ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸಂಬಂಧ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ