ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.