ಬೈಂದೂರು : ಕಳೆದ ಹಲವು ನಿರಂತವಾಗಿ ಸುರಿಯುತ್ತಿರುವ ಮಳೆಗೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿಯ ಅರಳಿಕಟ್ಟೆಮನೆ ಸುಶೀಲ ಶೆಡ್ತಿ ಎಂಬುವವರ ಮನೆಯ ಮೇಲೆ ಮಾವಿನ ಮರ ಬಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮನೆಯಲ್ಲಿದ್ದ ಕುಟುಂಬಿಕರನ್ನು ರಕ್ಷಿಸಿದ್ದಾರೆ. ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದ್ದಾರೆ.