ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸಾರಿಗೆ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಯೋಜನೆಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಂತ್ರಿ ಮಂಡಲ ಅನುಮೋದನೆ ನೀಡಿದೆ.
AWAKE ಸಂಸ್ಥೆ, ರಾಜಾಜಿನಗರ, ಬೆಂಗಳೂರು ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ರೂ 10.50 ಕೋಟಿಗಳ ಅಂದಾಜು ಮೊತ್ತದಲ್ಲಿ ಬಿಡದಿಯಲ್ಲಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ.
ಯೋಜನೆಯ ಹೈಲೈಟ್ಸ್ ಹೀಗಿದೆ:
-
ಅಂದಾಜು ರೂ.10.50 ಕೋಟಿಗಳಲ್ಲಿ ರಾಜ್ಯ ಸರ್ಕಾರದಿಂದ ರೂ.5.00 ಕೋಟಿಗಳ ಸಹಾಯ ಧನ ಹಾಗೂ ಕೇಂದ್ರ ಸರ್ಕಾರದಿಂದ ರೂ.5.50 ಕೋಟಿಗಳನ್ನು ಭರಿಸಬೇಕಾಗುತ್ತದೆ.
-
15ನೇ ಹಣಕಾಸು ಆಯೋಗದ ಅವಧಿಯಲ್ಲಿ Institute of Driving Training & Research, Regional Driving Centre and Driving Training Centre ಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿತ್ತು.
-
ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ದೃಷ್ಟಿಯಿಂದ ಚಾಲಕರಿಗೆ ತರಬೇತಿ ಹಾಗೂ ಚಾಲಕರ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯ ಹಾಗೂ ಇದಕ್ಕಾಗಿ ಸುಸಜ್ಜಿತ ವಾಹನ ಚಾಲನ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು ಹಾಗೂ ಅವುಗಳನ್ನು ನಿರ್ವಹಣೆ ಮಾಡುವುದು ಮುಖ್ಯವಾಗಿರುತ್ತದೆ.
-
ಈ ನಿಟ್ಟಿನಲ್ಲಿ PPP (Public-Private Partnership ಮಾದರಿಯಲ್ಲಿ ರಾಮನಗರದ ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸುವುದು
-
ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು AWAKE ಸಂಸ್ಥೆ ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.


























































