ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಇದೀಗ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದೆ. ಈಗಾಗಲೇ ಸಿಎಂ, ಡಿಸಿಎಂ ಹಾಗೂ 8 ಮಂದಿ ಹಿರಿಯ ಶಾಸಕರಷ್ಟೇ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದು ಮಂತ್ರಿಮಂಡಲ ವಿಸ್ತರಣೆ ಸಂಬಂಧದ ವಿದ್ಯಮಾನಗಳು ಗರಿಗೆದರಿವೆ.
ದಿಲ್ಲಿಯಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸುವ ತಯಾರಿ ಸಾಗಿದ್ದರೆ, ಇತ್ತ ರಾಜ್ಯ ರಾಜಧಾನಿಯಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ತಯಾರಿ ನಡೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 27ರಂದೇ ನೂತನ ಸಚಿವರ ಪ್ರಮಾಣವಚನ ಸಮಾರಂಭ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
ಒಂದೇ ಬಾರಿಗೆ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಚಿಂತನೆ ನಡೆದಿದ್ದು, ಅದಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ದಪಡಿಸಿರುವ ಪಟ್ಟಿಗೆ ಹೈಕಮಾಂಡ್ ಬಹುತೇಕ ಒಪ್ಪಿಗೆ ಸೂಚಿಸಿದೆ. ಆದರೆ ಕೆಲವು ಹಿರಿಯ ನಾಯಕರು ಸಂಪುಟ ಸೇರ್ಪಡೆಗೆ ಹಾಗೂ ಒಂದೇ ಸನುದಾಯದಿಂದ ಇಬ್ಬರು ಸಚಿವರಾಗುವ ವಿಚಾರದಲ್ಲಿ ನಾಯಕರ ನಡುವೆ ಒಮ್ಮತಾಭಿಪ್ರಾಯ ಮೂಡಿಲ್ಲ ಎನ್ನಲಾಗಿದೆ.
ಸಂಭವನೀಯ ಸಚಿವರ ಪಟ್ಟಿ ಹೀಗಿದೆ:




























































