ಕಲಬುರಗಿ: ಕಲಬುರಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ದತ್ತಾತ್ರೇಯ ಪಾಟೀಲ ರೇವೂರ್ ಗೆ ಸಚಿವ ಸ್ಥಾನ ನೀಡದ ಬಿಜೆಪಿ ನಾಯಕರ ಹಾಗೂ ಸಿಎಂ ವಿರುದ್ದ ಆಕ್ರೋಶ ಹೊರಹಾಕಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಅದರಲ್ಲೂ ಕಲಬುರಗಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಿಟ್ಟು ಹೊರಹಾಕಿದರು.
ಸಚಿವ ಸಂಪುಟದಲ್ಲಿ ದತ್ತಾತ್ರೇಯ ಪಾಟೀಲ ರೇವೂರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಆಗ್ರಹಿಸಿದರು.