ಯಾದಗಿರಿ: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಯಾಗುವ ಬಿಜೆಪಿ ಶಾಸಕ ರಾಜೂಗೌಡರ ಕನಸು ಭಗ್ನವಾಗಿದೆ. ಶಾಸಕ ರಾಜುಗೌಡಗೆ ಸಚಿವ ಸ್ಥಾನ ಕೈತಪ್ಪಿದ್ದ ಹಿನ್ನೆಲೆ ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಶಾಸಕ ರಾಜುಗೌಡ ಬೆಂಬಲಿಗರಿಂದ ಪ್ರತಿಭಟನೆ ನಡೆಯಿತು. ಸಂಪುಟ ವಿಸ್ತರಣೆ ವೇಳೆ ತಮ್ಮ ಶಾಸಕರನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು .