ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ದಲ್ಲಿನ ವಿವಾದಕ್ಕೀಡಾಗಿರುವ 50:50 ಮಾದರಿ ನಿವೇಶನ ಹಂಚಿಕೆ ಆದೇಶವನ್ನು ಸರ್ಕಾರ ರದ್ದುಗೊಳಿಸಿದೆ ಎಂದಿರುವ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಮುಡಾದ 50:50 ಅನುಪಾತದ ನಿವೇಶನ ಹಂಚಿಕೆ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳ ತಂಡದಿಂದ ತನಿಖೆ ನಡೆಯುತ್ತಿದೆ. ತನಿಖಾ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಬೇಕೆಂಬ ಬಿಜೆಪಿ ಆಗ್ರಹ ಬಗ್ಗೆ ಪ್ರತಿಕ್ರಿಸಿದ ಅವರು, ‘ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿಲ್ಲವೇ ಎಂದು ಪ್ರಶ್ನಿಸಿದರು.
ನನ್ನ ಪತ್ನಿ ಮುಡಾದಲ್ಲಿ ಕಾನೂನು ಬದ್ಧವಾಗಿ ನಿವೇಶನ ಪಡೆದಿದ್ದಾರೆ ಎಂದ ಅವರು, ಕೆಸರೆಯಲ್ಲಿದ್ದ ಜಮೀನು ವಶ ಪಡಿಸಿಕೊಂಡ ಸಂದರ್ಭದಲ್ಲಿ ಮುಡಾಗೆ ನನ್ನ ಪತ್ನಿ ಪತ್ರ ಬರೆದಿದ್ದು, ಪ್ರಾಧಿಕಾರದ ಸಭೆಯಲ್ಲಿ ತಪ್ಪೊಪ್ಪಿಕೊಂಡ ಅಧಿಕಾರಿಗಳು ವಿಜಯನಗರದಲ್ಲಿ ನಿವೇಶನ ಕೊಟ್ಟಿದ್ದಾರೆ. ನಾವು ವಿಜಯನಗರದಲ್ಲಿ ನಿವೇಶನ ಕೊಡುವಂತೆ ಕೇಳಿರಲಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು.