ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆದಿದ್ದು ಇದರ ಪ್ರಯುಕ್ತ ‘ಶ್ರೀ ರಾಮ ಪಟ್ಟಾಭಿಷೇಕ’ ಗಮನಸೆಳೆಯಿತು.

ಈ ಕೈಂಕರ್ಯ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾದರು. ಕೋಲಾಟ , ಭರತನಾಟ್ಯ ಸೇವೆಗಳಂತಹಾ ಕಾರ್ಯಕ್ರಮಗಳು ಕಾರ್ಯಕ್ರಮಕ್ಕೆ ಆಕರ್ಷಣೆ ತುಂಬಿತು.
ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ದೇವರ ಪಟ್ಟಾಭಿಷೇಕ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು .


























































