ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೀ ಇದೀಗ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮೀನುಗಾರರ ಬಂಧನ ವಿರೋಧಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘಟನೆಗಳು ಮಲ್ಪೆ ಬಂದರಿನಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹಿಳೆಯನ್ನು ಕಟ್ಟಿಹಾಕಿ ಎರಡು ಏಟು ಕೊಟ್ಟದ್ದನ್ನು ಸಮರ್ಥಿಸಿಕೊಂಡಿದ್ದ ಪ್ರಮೋದ್ ಮಧ್ವರಾಜ್, ಕಳ್ಳರನ್ನು ಕಟ್ಟಿ ಹಾಕದೆ ಇನ್ನೇನು ಮಾಡಲು ಸಾಧ್ಯ? ಎಂದು ಪ್ರತಿಭಟನೆಯಲ್ಲಿ ಹೇಳಿದ್ದಾರೆ ಎನ್ನಲಾಗಿದ್ದು, ಈ ಹೇಳಿಕೆ ಹಿನ್ನೆಲೆಯಲ್ಲಿಮಲ್ಪೆ ಠಾಣೆ ಪೊಲೀಸರು ಸ್ವಯಂಪ್ರೇರಿತ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.