ಬೆಂಗಳೂರು: ಜಾತಿ ಜನಗಣತಿ ಕುರಿತ ಕಾಂತರಾಜ್ ವರದಿ ಜಾರಿಯಾದಲ್ಲಿ ಲಕ್ಷಾಂತರ ಜನರಿಗೆ ಅನ್ಯಾಯವಾಗಲುತ್ತದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಾತಿ ಜನಗಣತಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಎಲ್ಲೋ ಕುಳಿತು ತಮಗೆ ಬೇಕಾದಂತೆ ವರದಿ ರೂಪಿಸಲಾಗಿದೆ. ಇದು ಜಾರಿಯಾದರೆ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಇಂತಹ ಮಹಾಪರಾಧ ಮಾಡುವ ಚಿಂತನೆ ಬೇಡ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.
ವಿವಾದಾತ್ಮಕ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂಲಕ ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯತ್ನಿಸುತ್ತಿದ್ದಾರೆ ಎಂದೂ ಸೋಮಣ್ಣ ಆರೋಪಿಸಿದರು. ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದ್ದಾರೆ.