ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಮಿಳುನಾಡಿಗೆ ನೀರು ವೈಹಾರಿಸುತ್ತಿರುವಾದ್ನ್ನು ಖಂಡಿಸಿ ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ.
ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ. ಸಾರಿಗೆ ಬಸ್ ಗಳಿಲ್ಲದೆ, ಆಟೋ ಟ್ಯಾಕ್ಸಿ ಸೇವೆ ವಿರಳವಾಗಿದ್ದು ಬೆಳ್ಳಂಬೆಳಿಗ್ಗೆಯೇ ಸಾರ್ವಜನಿಕರು ಪರ್ದಾದಾಡುವಂತಾಗಿದೆ.
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಯಾವುದೇ ಪ್ರತಿಭಟನೆ, ರಾಲಿಗಳನ್ನು ಮಾಡಿಸಲು ಅವಕಾಶ ಇಲ್ಲ ಎಂದಿರುವ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.