ದೆಹಲಿ: ಈ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್‌ಇ ಐಸಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವರ್ಷ ಪರೀಕ್ಷೆ ಇಲ್ಲದೆಯೇ ಅಂಕ ನೀಡಲು ತೀರ್ಮಾನಿಸಲಾಗಿದೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆಯಲ್ಲಿ ಪರೀಕ್ಷೆ ಈ ಬಗ್ಗೆ ನಿರ್ಧರಿಸಲಾಗಿದೆ, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದಯ ಸೂಕ್ತ ಕ್ರಮ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ವರ್ಷ ಕೋವಿಡ್ ಸೋಂಕಿನ ಪರಿಸ್ಥಿತಿ ಹಿನ್ನಲೆಯಲ್ಲಿ 12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ವಿಸ್ತೃತ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಂಡಿದ್ದೇವೆ, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯ ಕಾಪಾಡುವುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
Government of India has decided to cancel the Class XII CBSE Board Exams. After extensive consultations, we have taken a decision that is student-friendly, one that safeguards the health as well as future of our youth. https://t.co/vzl6ahY1O2
— Narendra Modi (@narendramodi) June 1, 2021