ಬೆಂಗಳೂರು: ದೇಶದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಪಡಿಸಲು ಒತ್ತಾಯ ಹೆಚ್ಚಿದೆ. ಈ ಕುರಿತಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೂಡಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿಯ CBSE 10ನೇ ತರಗತಿ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ರದ್ದುಪಡಿಸಿಲ್ಲ
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ಆದರೆ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ರದ್ದುಪಡಿಸಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದಿದ್ದಾರೆ.
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar (Modi ka Parivar) (@nimmasuresh) April 14, 2021
ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದಿರುವ ಸಚಿವ ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
— S.Suresh Kumar (Modi ka Parivar) (@nimmasuresh) April 14, 2021