ಹೊಸೂರು: ‘ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿಸಿದ್ದಾರೆ.
ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿ ಪೋಷಕರ ಆರೋಪ ಸಂಬಂಧ ಹೊಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ, ‘ಪಾಪ, ಅವರು ಹತಾಶರಾಗಿದ್ದಾರೆ, ಬೇಸರದಲ್ಲಿದ್ದಾರೆ. ಅವರಿಗೆ ಅವರ ಸಮಸ್ಯೆ ಇದೆ. ಹೀಗಾಗಿ ಮಾತನಾಡುತ್ತಾರೆ. ಅವರಿಗೆ ಉತ್ತರ ಕೊಡಲು ಹೋಗುವುದಿಲ್ಲ. ಕಾನೂನಿದೆ, ಪೊಲೀಸ್ ಅಧಿಕಾರಿಗಳಿದ್ದಾರೆ. ತನಿಖೆ ನಡೆಯುತ್ತಿದೆ. ಎಲ್ಲ ವಿಚಾರಣೆ ಮುಗಿಯಲಿ ಎಂದುವ ತಮ್ಮದೇ ಡಾಟಿಯಲ್ಲಿ ಹೇಳಿದರು.
ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ. ಅವರೇ ಇದನ್ನು ಬಗೆಹರಿಸಿಕೊಳ್ಳಬೇಕು ಎಂದ ಡಿಕೆಶಿ, ರಮೇಶ್ ಜಾರಕಿಹೊಳಿ ಅವರು ಇವತ್ತೊಂದು ಮಾತನಾಡುತ್ತಾರೆ, ನಾಳೆ ಒಂದು ಮಾತನಾಡುತ್ತಾರೆ, ನಾಡಿದ್ದು ಒಂದು ಮಾತನಾಡುತ್ತಾರೆ. ಅವಕ್ಕೆಲ್ಲ ಉತ್ತರ ಕೊಟ್ಟುಕೊಂಡು ಕೂರಲು ನಾನು ತಯಾರಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅವರದೇ ಸರ್ಕಾರ ಇದೆ. ಕಾನೂನು ಪ್ರಕಾರ ತನಿಖೆ ಮಾಡಲಿ. ತಪ್ಪು ಮಾಡಿರುವವರಿಗೆ ಶಿಕ್ಷೆ ನೀಡಲಿ ಎಂದರು.