ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಸಿಡಿ ವಿಚಾರ ಇದೀಗ ರಾಜ್ಯ ಬಿಜೆಪಿ ಸರ್ಕಾರದ ಪಾಲಿಗೆ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ. ಇದೇ ಸಂದರ್ಭದಲ್ಲಿ ಲೈಂಗಿಕ ಕಿರುಕುಳದ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಡವೂ ಹೆಚ್ಚಾಗಿದೆ.
ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು. ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ, ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ. ಆರೋಪಿ ಜಾರಕಿಹೊಳಿಯವರನ್ನು ಕೂಡಲೇ ಬಂಧಿಸವೇಕೆಂದು ಆಗ್ರಹಿಸಿ ಕಾಂಗ್ರೆಸ್ ಮಾಡಿರುವ ಸರಣಿ ಟ್ವೀಟ್ ಸಂಚಲನಕ್ಕೆ ಕಾರಣವಾಗಿದೆ.
ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ. ಸಂತ್ರಸ್ತೆ ದೂರು ಸಲ್ಲಿಸಿ, FIR ದಾಖಲಾದರೂ ಬಂಧಿಸಲಿಲ್ಲ. ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ ಎಂದು ಟೀಕಿಸಿರುವ ಕಾಂಗ್ರೆಸ್, ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ? ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ? ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಪ್ರಶ್ನಿಸಿದೆ.
https://twitter.com/INCKarnataka/status/1376886776485138434
ಸಂತ್ರಸ್ತೆ ನಿರ್ಭಿತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ. ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಎಂದು ಕಾಂಗ್ರೆಸ್ ಪಕ್ಷ ಗೃಹ ಸಚಿವರನ್ನು ಪ್ರಶ್ನೆ ಮಾಡಿದೆ.
https://twitter.com/INCKarnataka/status/1376882183126675457
ಸಂತ್ರಸ್ತೆ ನನಗೆ ಜೀವ ಬೆದರಿಕೆ ಇದೆ ಎಂದಿದ್ದಾಳೆ. ಸಂತ್ರಸ್ತೆ ಪರ ವಕೀಲರು ನಮಗೂ ಬೆದರಿಕೆ ಇದೆ ಎಂದಿದ್ದಾರೆ. ಆರೋಪಿ ಪ್ರಭಾವಿಯಾದ ಕಾರಣ ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ದಿನೇಶ್ ಕಲ್ಲಹಳ್ಳಿ ಕೊಟ್ಟ ದೂರನ್ನು ವಾಪಸ್ ಪಡೆದ ಘಟನೆ ಇದೆಲ್ಲದಕ್ಕೂ ಪುಷ್ಠಿ ಕೊಡುತ್ತದೆ. ಆದರೂ ಆರೋಪಿ ಬಂಧನವಿಲ್ಲ ಏಕೆ ಎಂದು ಗೃಹಸಚಿವ ಬೊಮ್ಮಾಯಿ ಅವರನ್ನು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.
https://twitter.com/INCKarnataka/status/1376914363550822404
ಬಿಜೆಪಿ ಆಡಳಿತದಲ್ಲಿ ಕಾನೂನು ಬದಲಾಗಿದೆ. ಇಲ್ಲಿ ಸಂತ್ರಸ್ತೆಯನ್ನು ಪೊಲೀಸ್ ವಶಕ್ಕೆ ಪಡೆಯಬಹುದು, ಆರೋಪಿ ಸ್ವಇಚ್ಛೆಯಂತೆ ತಿರುಗಾಡಿಕೊಂಡಿರಬಹುದು ಎಂದು ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.
https://twitter.com/INCKarnataka/status/1376900771225071626
Related