ಬೆಂಗಳೂರು: ಸಿಡಿ ಅನಾವರಣ ಮಾಡಿರುವ ವಿವಾದದಿಂದ ವಿಚಲಿತರಾಗಿರುವ ಸಚಿವ ರಮೇಶ್ ಜಾರಕಿಹೊಳಿ ಈ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವಿಶ್ಲೇಷಣೆ ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದ ಅವರು, ನಾನು ತಪ್ಪೇ ಮಾಡಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ತಪ್ಪಿತಸ್ಥ ಎಂಬುದು ತನಿಖೆಯಿಂದ ತಿಳಿದುಬಂದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.