ಬೆಂಗಳೂರು: ರಮೇಶ್ ಜಾರಕಿಹೊಳಿ ತಲೆದಂಡಕ್ಕೆ ಕಾರಣವಾದ ಸಿಡಿ ವಿವಾದದಲ್ಲಿ ಪೊಲೀಸರು ವಿಶ್ವಾಸ ಕಳೆದುಕೊಂಡಿದ್ದಾರೆಯೇ? ಪ್ರಸ್ತುತ ನಡೆದಿರುವ ವಿದ್ಯಮಾನಗಳನ್ನು ಬೊಟ್ಟುಮಾಡಿತ್ತಿರುವ ಕಾಂಗ್ರೆಸ್ ನಾಯಕರು ಎಸ್‌ಐಟಿ ಮೇಲೆ ವಿಶ್ವಾಸ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತಂತೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಸರಗಕಾರದ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು? ರಾಜ್ಯದ ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂಬ ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ ‘ಮೂಕನಾಟಕ’ ಎಂದು ಅಭಿಪ್ರಾಯಪಟ್ಟಿದ್ದಾರೆ.
.@BJP4Karnataka ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು?
ರಾಜ್ಯದ ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂಬ ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ 'ಮೂಕನಾಟಕ'.@CMofKarnataka @BSBommai #BJPGoondagiri
2/2— Siddaramaiah (@siddaramaiah) March 28, 2021
ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಸಿದ್ದದರಾಮಯ್ಯ ಪ್ರಶ್ನಿಸಿದ್ದಾರೆ.
ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ @BSYBJP ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? 1/5 #Jarkiholi_CDcase
— Siddaramaiah (@siddaramaiah) March 29, 2021
ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ. 3/5#Jarkiholi_CDcase
— Siddaramaiah (@siddaramaiah) March 29, 2021
ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ ಎಂದವರು ಎಚ್ಚರಿಕೆ ನೀಡಿದ್ದಾರೆ.
ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ @BSYBJP, ಗೃಹಸಚಿವ @BSBommai ಮತ್ತು ಇಡೀ @BJP4Karnataka ಸರ್ಕಾರವೇ ಹೊಣೆಯಾಗುತ್ತದೆ. 2/5#Jarkiholi_CDcase
— Siddaramaiah (@siddaramaiah) March 29, 2021