ಬೆಂಗಳೂರು: ಸಿಡಿ ವಿವಾದ ಇದೀಗ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ವಿವಾದ ಕುರಿತಂತೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಮೇಶ್ ಜಾರಕಿಹೊಳಿ ವಿರುದ್ದ ಪ್ರಕರಣ ದಾಖಲಿಸದಿರುವ ಬಗ್ಗೆ ಅಸಮಾಧಾನ ಹೊರಹಾಕಿದರು.
ಇದೇ ವೇಳೆ, ಸಿಡಿ ವಿವಾದದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿರುವ ಆರು ಸಚಿವರು ಅಧಿಕಾರದಲ್ಲಿ ಇರಲು ಯೋಗ್ಯರಲ್ಲ. ಅವರನ್ನೇ ಅವರು ರಕ್ಷಣೆ ಮಾಡಿಕೊಳ್ಳಲಿಲ್ಲವೆಂದರೆ ಇನ್ನೂ ಜನರನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು. ಕೋರ್ಟ್ ಗೆ ಹೋಗಿರುವ ಆರು ಮಂದಿ ಸಚಿವರು ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಅಗ್ರಹಿಸಿದರು.