ಬೆಂಗಳೂರು: ವಿವಾದಿತ ಸಿಡಿ ವಿಚಾರ ವಿಧಾನಸಭೆಯಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ವಿವಾದದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ಪ್ರಕರಣ ದಾಖಲಿಸದ ಸರ್ಕಾರದ ವಿರುದ್ದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸದನದಲ್ಲಿ ಆಸಮಾಧಾನ ಹೊರಹಾಕಿದರು. ಸಿಡಿ ಪ್ರಕರಣದ ತನಿಖೆಯಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ ಎಂದ ಅವರು, ಸಂತ್ರಸ್ತೆ ಯುವತಿಯನ್ನು ಇದುವರೆಗೂ ಪತ್ತೆಹಚ್ಚಿಲ್ಲ. ಸತ್ಯಾಂಶ ಹೊರಬರಬೇಕಾದರೆ ಎಸ್‌ಐಟಿ ಬದಲಿಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ನಿರ್ಭಯ ಪ್ರಕಣದಲ್ಲಿ ಸುಪ್ರೀಂ ಕೋರ್ಟ್ ಏನು ಹೇಳಿದೆ. ಇದುವರೆಗೂ ಏಕೆ ಪೊಲೀಸರು ದೂರು ದಾಖಲು ಮಾಡಿಕೊಳ್ಳಲಿಲ್ಲ. ಯುವತಿ ಎಲ್ಲಿದ್ದಾಳೆ ಎಂಬುದನ್ನುಇನ್ನೂ ಪತ್ತೆಹಚ್ಚಲು ಆಗಲಿಲ್ಲ ಎಂದರೆ ಹೇಗೆ? ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.