ಚಾಮರಾಜನಗರ: ಇತರ ರಾಜ್ಯಗಳಲ್ಲಿನ ಸನ್ನಿವೇಶ ಕರ್ನಾಟಕದಲ್ಲೂ ಕಂದುಬರುತ್ತಿದೆ. ಸುಮಾರು 24 ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕೋವಿಡ್ ಸಂಕಟ ಕಾಲದಲ್ಲಿ ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆಯ ಕೊರತೆ ಇದೆ. ಅದರಂತೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲೂ ಅವಾಂತರ ಸೃಷ್ಟಿಯಾಗಿದೆ. ಆಮ್ಲಜನಕ ಕೊರತೆ ಹಾಗೂ ಇತರ ಕಾರಣಗಳಿಂದಾಗಿ ಸರಣಿ ಸಾವು ಸಂಭವಿಸಿದೆ. ರಾತ್ರಿ 16 ಮಂದಿ ರೋಗಿಗಳು ಈ ಆಸ್ಪತ್ರೆಯಲ್ಲಿ ವಿವಿಧ ಕಾರಣಗಳಿಂದಾಗಿ ಮೃತಪಟ್ಟಿದ್ದರೆ, ಇಂದು ನಸುಕಿನ ಜಾವ 4 ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ಮೃತಪಟ್ಟಿದ್ದಾರೆನ್ನಲಾಗಿದೆ.
ಈ ನಡುವೆ ಆಸ್ಪತ್ರೆ ಆವರಣದಲ್ಲಿ ಮೃತರ ಬಂಧುಗಳ ಆಕ್ರಂದರ ಮುಗಿಲು ಮುಟ್ಟಿದ್ದರೆ, ಇನ್ನೊಂದೆಡೆ ಸರ್ಕಾರದ ನಿರ್ಲಕ್ಷ್ಯವೇ ಈ ಸರಣಿ ಸಾವಿಗೆ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.