ಚಾಮರಾಜನಗರ: ಕೋವಿಡ್ ಸಂಕಟ ಕಾಲದಲ್ಲಿ ಎಲ್ಲೆಲ್ಲೂ ಮರಣ ಮೃದಂಗದ ಸದ್ದು ಮಾರ್ಧನಿಸುತ್ತಿದೆ. ಈ ಸಂದರ್ಭದಲ್ಲೇ ಆಮ್ಲಜನಕ ಕೊರತೆ ಹಾಗೂ ವಿವಿಧ ಕಾರಣಗಳಿಂದಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೇವಲ 24 ತಾಸುಗಳಲ್ಲಿ ಸಾವನ್ನಪ್ಪಿದ್ದಾರೆ.
ಈ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ,ವಭಾನುವಾರ ಒಂದೇ ದಿನ ಜಿಲ್ಲೆಯಲ್ಲಿ 24 ಮಂದಿ ಮೃತಪಟ್ಟಿದ್ದು ಬಹುಪಾಲು ಮಂದಿ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದವರು ಎಂದು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯರಾತ್ರಿ 11 ರ ಹೊತ್ತಿಗೆ ಆಮ್ಲಜನಕ ಕೊರತೆ ಉಂಟಾಗಿತ್ತು. ಆದರೆ, 24 ಮಂದಿಯೂ ಆ್ಯಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ. ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ 14 ಮಂದಿ ಮೃತಪಟ್ಟಿದ್ದಾರೆ. ರಾತ್ರಿ 12ರಿಂದ 2 ರವರೆಗೆ ಮೂವರು ಮೃತಪಟ್ಟಿದ್ದು ಮಧ್ಯರಾತ್ರಿ 2 ರಿಂದ ಮುಂಜಾನೆ 7 ರವರೆಗೆ 7 ಮಂದಿ ಸತ್ತಿದ್ದಾರೆ. ಈಗಾಗಲೇ, ವೈದ್ಯರು ಡೆತ್ ಆಡಿಟ್ ಅಗುತ್ತಿದ್ದು ಮಧ್ಯಾಹ್ನದ ವೇಳೆಗೆ ಸಾವಿಗೆ ನಿಜಾಂಶ ಗೊತ್ತಾಗಲಿದೆ ಎಂದು ತಿಳಿಸಿದರು.