ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಸಹಿತ ವಿವಿಧ ಕಾರಣಗಳಿಂದಾಗಿ 24 ತಾಸಿನಲ್ಲಿ 24 ಮಂದಿ ಕೊರೊನಾ ಸೋಂಕಿತರ ಮೃತಪಟ್ಟಿರುವ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಸರಣಿ ಸಾವುಗಳ ಪ್ರಕರಣದ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿರಂತರ ಸಾವುನೋವುಗಳ ಜವಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು, ಮೃತ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ, ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆ ಆಗಬೇಕೆಂದು ಒತ್ತಾಯಿಸಿದ್ದಾರೆ.