ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆ… ಕೊರೊನಾ ಸೋಂಕಿತರ ನರಳಾಟ, ಹಲವರ ಸಾವು!?
ಚಾಮರಾಜನಗರ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಉಂಟಾಗಿ ಹಲವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು ಜಿಲ್ಲಾಸ್ಪತ್ರೆಯ ಹೊರ ಭಾಗದಲ್ಲಿ ಸೋಂಕಿತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ಸಮರ್ಪಕವಾಗಿ ಅಕ್ಸಿಜನ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಕೊರತೆ ಉಂಟಾಗಿದ್ದು ಐಸಿಯುನಲ್ಲಿರುವ 50ಕ್ಕೂ ಹೆಚ್ಚು ಸೋಂಕಿತರು ನರಳಾಡುತ್ತಿದ್ದಾರೆ, ಕೆಲವರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಬಳಿ ಆಮ್ಲಜನಕದ ಕೊರತೆ ಬಗ್ಗೆ ಅಳಲು ತೋಡಿಕೊಳ್ಳುತ್ತಿದ್ದಾರೆ.
ಇನ್ನು, ನಂಜನಗೂಡಿನ ಸೋಂಕಿತರೊಬ್ಬರು ಆ್ಯಕ್ಸಿಜನ್ ಕೊರತೆ ಉಂಟಾಗಿ ಮೃತಪಟ್ಟಿದ್ದು ರಾತ್ರಿ ಆ್ಯಕ್ಸಿಜನ್ ಕೊರತೆಯಿದೆ ಎಂದು ಸ್ನೇಹಿತರಿಗೆ ವಿಡಿಯೋ ಕಾಲ್ ಮೂಲಕ
ಅಳಲು ತೋಡಿಕೊಂಡಿದ್ದರು, ಮುಂಜಾನೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟಿಲ್ಲ, ಬೇರೆ ಬೇರೆ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸುತ್ತಿದ್ದಾರೆ.