ಬೆಂಗಳೂರು: ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯನ್ನು ಖಂಡಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿದೆ.
ಚಾಮರಾಜನಗರ ಘಟನೆಯ ಬೆನ್ನಲ್ಲೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಬೆಂಗಳೂರಿನಲ್ಲಿದ್ದುಕೊಂಡು ವೀಡಿಯೋ ಸಂವಾದ ಮೂಲಕ ಶಾಸಕರೊಂದಿಗೆ ಚರ್ಚಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ನಿರ್ಲಕ್ಯದ ವಿರುದ್ದ ಆಕ್ರೋಶ ಹೊರಹಾಕಿದರು. ಹಲವು ಶಾಸಕರು ಮಾತನಾಡಿ ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸಬೇಕಿದೆ ಎಂದರು.
ಈ ನಡುವೆ ಚಾಮರಾಜನಗರ ಆಸ್ಪತ್ರೆಯಲ್ಲಿನ ರೋಗಿಗಳ ಸಾವಿನ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ನಾಯಕರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.
ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? @BJP4Karnataka ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು. 3/4#ResignBSY
— Siddaramaiah (@siddaramaiah) May 3, 2021
ಮುಖ್ಯಮಂತ್ರಿ ಯಡಿಯೂರಪ್ಪ
ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ @BSYBJP ಹಾಗೂ ಆರೋಗ್ಯ ಸಚಿವ @mla_sudhakar ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. 4/4 #ResignBSY
— Siddaramaiah (@siddaramaiah) May 3, 2021