ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರನ್ನು ಪ್ರದೇಶ ಬಿಜೆಪಿ ವತಿಯಿಂದ ಇಂದು ಸನ್ಮಾನಿಸಲಾಯಿತು.
ಬೆಂಗಳೂರಿನ ಕತ್ರಿಗುಪ್ಪೆಯ ಅವರ ನಿವಾಸಕ್ಕೆ ತೆರಳಿದ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ದಶರಥ ವೈಲಾಯ ಅವರು ಪಕ್ಷದ ವತಿಯಿಂದ ಅಭಿನಂದಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆಗಿನ ಒಡನಾಟ, ಅವರಿಂದ ಸ್ಫೂರ್ತಿ ಪಡೆದ ಕುರಿತು ಕಂಬಾರರು ನೆನಪುಗಳನ್ನು ಹಂಚಿಕೊಂಡರು.