ದಾವಣಗೆರೆ: ಪೊಲೀಸ್ ವಶದಲ್ಲಿದ್ದ ಆವ್ಯಕ್ತಿಯ ಸಾವು ಖಂಡಿಸಿ ಸಾರ್ವಜನಿಕರು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಸುಮಾರು 25 ಜನರನ್ನು ಬಂಧಿಸಿದ್ದಾರೆ.
ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದ. ಇದರಿಂದ ರೊಚ್ಚಿಗೆದ್ದ ಗುಂಪು ಚನ್ನಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ದಾಂದಲೆ ನಡೆಸಿತ್ತು. ಹಲವಾರು ವಾಹನಗಳಿಗೆ ಹಾನಿಯುಂಟುಮಾಡಿತ್ತು. ಘಟನೆಯಲ್ಲಿ10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
ಪ್ರಕರಣ ಬಗ್ಗೆ ಸಿಐಡಿ ತನಿಖೆ ಸಾಗಿದ್ದು ಅದಾಗಲೇ ಸುಮಾರು 25 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.