ಬೆಂಗಳೂರು: ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಸಿ.ಪಿ.ಯೋಗಿಶ್ವರ್ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾಹ ಕ್ಷೇತ್ರದಲ್ಲಿ ಟಿಕೆಟ್ ಪಡೆಯಲು ಸಿ.ಪಿ.ಯೋಗಿಶ್ವರ್ ಹರಸಾಹಸ ನಡೆಸಿದ್ದರು. ಆದರೆ ನಾಯಕರ ಒತ್ತಡ ಹಿನ್ನೆಲೆಯಲ್ಲಿ ಅವಕಾಶ ಬಿಟ್ಟುಕೊಟ್ಟಿದ್ದ್ದರು. ಇದೀಗ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಒಲವು ಹೊಂದಿರುವ ಯೋಗೀಶ್ವರ್, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಕಸರತ್ತು ನಡೆಸಿದ್ದಾರೆ.
ಇದೇ ವೇಳೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗಿಶ್ವರ್ ಕಣಕ್ಕಿಳಿಯುವ ಸಾಧ್ಯತೆಗಳ ಬಗ್ಗೆ ಜೆಡಿಎಸ್ ನಾಯಕರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದವರು ಹೇಳಿದ್ದಾರೆ.