ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಒಕ್ಕೂಟಕ್ಕೆ ಸುಸಜ್ಜಿತ ಕಟ್ಟಡ ಬೇಕೆಂಬ ಜಿಲ್ಲೆಯ ಜನರ ಆಸೆ ಕೊನೆಗೂ ಕಾರ್ಯರೂಪಕ್ಕೆ ಬರಲಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಒಕ್ಕೂಟದ ನೂತನ ಕಟ್ಟಡದ ಶಂಕು ಸ್ಥಾಪನೆ ನೆರವೇರಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಶಂಕು ಸ್ಥಾಪನೆ ನೆರವೇರಿಸಿದರು.
ಸಂಸದ ಬಚ್ಚೇಗೌಡ, ಸಹಕಾರ ಸಚಿವ ಸಿ. ಸೋಮಶೇಖರ್ ಉಪಸ್ಥಿಿತಿಯಲ್ಲಿ ಮಂಗಳವಾರ ಹಾರೋಬಂಡೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸಹಕಾರ ಇಲಾಖೆ ನಿವೇಶನದಲ್ಲಿ ಈ ಕಾರ್ಯಕ್ರಮ ನೆರವೇರಿಲಾಯಿತು.
ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.