ಚಿಕ್ಕಮಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ದೇಶವ್ಯಾಪಿ ಇಂದು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.
ಅಜಾತ ಶತ್ರು ವಾಜಪೇಯಿಯವರು ರೈತರ ಅಭ್ಯುದಯದ ಯೋಜನೆಗಳಿಗೆ ಮುನ್ನುಡಿ ಬರೆದವರು. ಈ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರೈತರ ದಿನವಾನ್ನಾಗಿ ಬಿಜೆಪಿ ಕಾರ್ಯಕರ್ತರು ಆಚರಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಜಿ ಪ್ರಧಾನಿ ವಾಜಪೇಯಿಯವರು ತೋರಿಸಿಕೊಟ್ಟ ಮಾರ್ಗದಲ್ಲಿ ಸಾಗಿ ಪಕ್ಷವನ್ನು ಬಲಗೊಳಿಸಿ ರಾಷ್ಟ್ರ ಕಟ್ಟುವ ಕೆಲಸ ಮಾಡೋಣ ಎಂದು ಕಾರ್ಯಕರ್ತರ ಜೊತೆ ಸಂಕಲ್ಪ ಮಾಡಿದರು.