ಚಿಕ್ಕಮಗಳೂರು: ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಯೋಜನೆಯ ಕಾಮಗಾರಿ ಹಾಗೂ ಅಮೃತ್ ಯೋಜನೆಯಡಿ ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಸಂಬಂಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನ ಸೌಧದದಲ್ಲಿ ಜರುಗಿತು.
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ರಾಜು ಗೌಡ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ ಎಂ.ಎನ್. ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ. ಎನ್.ಜಯರಾಂ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಮಂಡಳಿ ಮುಖ್ಯ ಅಭಿಯಂತರ ಕೇಶವ ಉಪಸ್ಥಿತರಿದ್ದರು.