ಚಿಕ್ಕಮಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಿಕ್ಕಮಗಳೂರು ನಗರಸಭೆ ಚುನಾವಣಾ ಅಖಾಡದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಂಗಳವಾರ ಅವರು ಚಿಕ್ಕಮಗಳೂರು ನಗರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ಕೈಗೊಂಡರು.
ಕೋಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 5 ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಮಧುಕುಮಾರ್ ರಾಜ್ ಅರಸ್, 6 ನೇ ವಾರ್ಡ್ ನ ಅಭ್ಯರ್ಥಿ ಸುಜಾತ ಶಿವಕುಮಾರ್ ಹಾಗೂ 7 ನೇ ವಾರ್ಡ್ ನ ಅಭ್ಯರ್ಥಿ ಕುಮಾರ್ ಇವರ ಪರವಾಗಿ ಇಂದು ಕೋಟೆ ಹಾಗೂ ದೋಣಿಕಣದಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಾಥ್ ನೀಡಿದರು.