ಬೆಂಗಳೂರು: ಮತದಾರರ ಪಟ್ಟಿಯಲ್ಲಿನ ಗೋಲ್ಮಾಲ್ ಕುರಿತಂತೆ ತನಿಖೆ ಸಾಗಿರುವಾಗಲೇ ಸಚಿವ ಅಶ್ವತ್ಥನಾರಾಯಣ್ ಅವರ ಪಾತ್ರದ ಬಗ್ಗೆಯೂ ಅನುಮಾನದ ಹುತ್ತ ಬೆಳೆದಿದೆ. ಈ ಹಗರಣ ಕುರಿತಂತೆ ಕೆಲವು ಮಹತ್ವದ ಸಂಗತಿಗಳು ಬೆಳಕಿಗೆ ಬರುತ್ತಿದ್ದು, ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿಕೊಂಡಿದ್ದರೆಂಬ ವಿಚಾರ ಕೋಲಾಹಲಕ್ಕೆ ಕಾರಣವಾಗಿದೆ.

‘ಚಿಲುಮೆ’ಯಲ್ಲಿನ ಕರ್ಮಕಾಂಡದ ಕುರಿತಂತೆ ಅಕ್ರಮಗಳನ್ನು ಬೆನ್ನತ್ತಿರುವ ತನಿಖಾ ತಂಡ ಈಗಾಗಲೇ ಹಲವರನ್ನು ಬಂದಿಸಿದೆ. ಆದರೆ ಪ್ರಭಾವಿಗಳನ್ನು ಯಾಕೆ ಪರಿಗಣಿಸಿಲ್ಲ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಅದೇ ಸಂದರ್ಭದಲ್ಲಿ ‘ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ ಎನ್ನಲಾದ ಸಂಗತಿ ಮಾಧ್ಯಮಗಳ ಮೂಲಕ ಬಹಿರಂಗವಾಗಿದ್ದು ರಾಜ್ಯ ಬಿಜೆಪಿ ಸರ್ಕಾರ ಮುಜುಗರದ ಪರಿಸ್ಥಿತಿಯಲ್ಲಿ ಸಿಲುಕಿದೆ.
ಒತ್ತಡ ಹಾಕಿದ ರಾಜಕೀಯದವರು ಯಾರು?
ಇದೇ ವೇಳೆ, ‘ಚಿಲುಮೆ’ಗಾಗಿ ರಾಜಕೀಯ ಒತ್ತಡ ಹೇರಿದವರು ಯಾರು ಎಂದು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನೆಯನ್ನು ಮುಂದಿಟ್ಟು ಒಟ್ಟಾರೆ ಬೆಳವಣಿಗೆ ಕುರಿತ ಕುತೂಹಲವನ್ನು ಹೆಚ್ಚಿಸಿದೆ.
“ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು? ಅವರ ಹಿತಾಸಕ್ತಿ ಏನಿತ್ತು? ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು? ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ? ಅಕ್ರಮಗಳ ಮಹಾಪೋಷಕ ಬಸವರಾಜ್ ಬೊಮ್ಮಾಯಿ ಅವರು ಜನತೆಗೆ ಉತ್ತರಿಸಬೇಕು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಒತ್ತಾಯಿಸಿದೆ.
ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ.
ಒತ್ತಡ ಹಾಕಿದ ರಾಜಕೀಯದವರು ಯಾರು?
ಅವರ ಹಿತಾಸಕ್ತಿ ಏನಿತ್ತು?
ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು?
ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ?ಅಕ್ರಮಗಳ ಮಹಾಪೋಷಕ @BSBommai ಅವರು ಜನತೆಗೆ ಉತ್ತರಿಸಬೇಕು. pic.twitter.com/yFQnMHXxON
— Karnataka Congress (@INCKarnataka) November 28, 2022
ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ ಅಶ್ವತ್ಥನಾರಾಯಣ್ ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ ಎಂದು ಸಿಎಂ ಅವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಚಿವರಿಗೂ ಚಿಲುಮೆಗೂ ಏನು ಸಂಬಂಧ? ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ? ಎಂಬ ಅನುಮಾನವನ್ನೂ ಕಾಂಗ್ರೆಸ್ ವ್ಯಕ್ತಪಡಿಸಿದೆ.
ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ @drashwathcn ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ @BSBommai ಅವರೇ?
ಸಚಿವರಿಗೂ ಚಿಲುಮೆಗೂ ಏನು ಸಂಬಂಧ?ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ?
ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?— Karnataka Congress (@INCKarnataka) November 28, 2022























































