ಶಿವಮೊಗ್ಗ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲ ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ನೇಹಾ ಹಿರೇಮಠ ಕೊಲೆ ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ, ನೇಹಾ ಹಿರೇಮಠ್ ಹತ್ಯೆ ಪ್ರಕರಣ ಶೀಘ್ರ ಇತ್ಯರ್ಥ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ಕೋರ್ಟ್ ರಚನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.