ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಪ್ರತಿಭಟನೆಗಳು ಹಿಂಸಾಚಾರ ಅಥವಾ ಗಲಭೆಗೆ ತಿರುಗದಂತೆ ಮುನ್ನೆಚ್ಚರಿಕೆ ವಹಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ಹೆಚ್ಚಿಸುವುದು ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸರ್ಕಾರ ನಿರ್ದೇಶನ ನೀಡಿದೆ.
ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸರು ನಿಗಾ ವಹಿಸಿದ್ದಾರೆ.

ದೆಹಲಿ ಗಡಿ ಪ್ರದೇಶಗಳಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ನೋ
ಸಂಚಾರ ನಿರ್ಬಂಧಗಳು ಸ್ಥಳದ ಪರಿಸ್ಥಿತಿಗೆ ಅನುಗುಣವಾಗಿ ಬದಲಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಸಂಚಾರ ಪೊಲೀಸರ ಅಧಿಕೃತ ಮಾಹಿತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.














































































