ಹೈದರಾಬಾದ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ ಸುಧಾಕರ್, ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಗುಪ್ತ ವಾರ್ತೆ ಇಲಾಖೆಯ ಎಡಿಜಿಪಿ ದಯಾನಂದ್, ಟಿಟಿಡಿ ನಿರ್ದೇಶಕ ಎಂಎನ್ ಶಶಿಧರ ಮೊದಲಾದ ಗಣ್ಯರು ಉಪಸ್ಥಿತರಿದ್ದರು