ಕೇಂದ್ರ ಸರ್ಕಾರದ ಈ ನಿರ್ಧಾರವು ಜನರಿಗೆ ದೀಪಾವಳಿಯ ಉಡಗೊರೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧಾರವನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯ ಸರ್ಕಾರದ ವತಿಯಿಂದಲೂ ತೆರಿಗೆ ಕಡಿತದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂಪಾಯಿ ಕಡಿಮೆಗೊಳಿಸಲು ನಿರ್ದರಿಸಿದೆ ಎಂದಿದ್ದಾರೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ.ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂಪಾಯಿ ಹಾಗೂ ಡಿಸೇಲ್ ಅಂದಾಜು 81.50 ರೂಪಾಯಿ ಆಗುವ ನೀರಿಕ್ಷೆಯಿದೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3— Basavaraj S Bommai (Modi Ka Parivar) (@BSBommai) November 3, 2021
ರಾಜ್ಯ ಸರಕಾರದ ಈ ನಿರ್ದಾರವು ಬುಧವಾರ ಸಾಯಂಕಾಲದಿಂದ ಅನ್ವಯವಾಗುವುದು ಎಂದವರು ತಿಳಿಸಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆಯಾಗಿದೆ ಎಂದವರು ಹೇಳಿದ್ದಾರೆ.
ರಾಜ್ಯ ಸರಕಾರದ ಈ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು.
3/3@CMofKarnataka— Basavaraj S Bommai (Modi Ka Parivar) (@BSBommai) November 3, 2021