ಉಡುಪಿ: ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾll ಕೆ. ಸುಧಾಕರ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು, ಪಲಿಮಾರು ಮಠಕ್ಕೆ ಭೇಟಿ ನೀಡಿ ಪಲಿಮಾರು ಮಠದ ಹಿರಿಯ ಸ್ವಾಮಿಗಳಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಕಿರಿಯ ಸ್ವಾಮಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರ ಆಶೀರ್ವಾದ ಪಡೆದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.