ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರ ಜೊತೆ ಬೆರೆತು ಸಂಭ್ರಮಿಸಿದರು.
ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದೆ.
ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು,… pic.twitter.com/Cu7hOBjdYP
— Siddaramaiah (@siddaramaiah) June 17, 2024
ಬಕ್ರೀದ್ ಅಂಗವಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ಸಚಿವ ಜಮೀರ್ ಅಹ್ಮದ್ ಸೇರಿದಂತೆ ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಈ ಪ್ರಾರ್ಥನೆಯಲ್ಲಿ ಭಾಗಿಯಾದರು.
ತಮ್ಮ ಹಬ್ಬದ ಸಡಗರದಲ್ಲಿ ಭಾಗಿಯಾಗಲು ಆಗಮಿಸಿದ ಸಿಎಂ ಕುತೂಹಲದ ಕೇಂದ್ರಬಿಂದುವಾದರು. ಮುಖ್ಯಮಂತ್ರಿಯನ್ನು ನೋಡಲು ಜನ ಮುಗಿಬಿದ್ದರು. ಫೊಟೋ ಕ್ಲಿಕ್ಕಿಸಿ ಖುಷಿಪಟ್ಟರು.
ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮೂಹಿಕ ಪ್ರಾರ್ಥನೆಯು ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವಂತಹ ಸನ್ನಿವೇಶ ಸೃಷ್ಟಿಸುತ್ತದೆ ಎಂದು ಪ್ರತಿಪಾದಿಸಿದರು.
ಸರ್ವ ಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ಸರ್ಕಾರ ನಂಬಿಕೆ ಇಟ್ಟಿದೆ ಎಂದ ಸಿಎಂ, ಸಂವಿಧಾನ ಹೇಳುವಂತೆ, ಯಾವುದೇ ತಾರತಮ್ಯ ಇಲ್ಲದೆ ಸರ್ಕಾರ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.