ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್‌ಲಾಕ್ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಬೆಂಗಳೂರನಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಗಮನಸೆಳೆಯಿತು.
ಮುಂದಿನ ತೀರ್ಮಾನಗಳಿಗೂ ಮುನ್ನ ಯಡಿಯೂರಪ್ಪ ಅವರು ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದರು. ಮುಖ್ಯಮಂತ್ರಿಯವರು ಇಂದು ತಮ್ಮ ನಿವಾಸದಲ್ಲಿ ನಡೆಸಿದ ಈ ಸಭೆಯಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಚರ್ಚೆ ನಡೆಸಿದರು.
ನೈಟ್ ಕರ್ಪ್ಯುವನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ತೀರ್ಮಾನಿಸಲಾಯಿತು. ಸಿನಿಮಾ ಥಿಯೇಟರ್, ರಂಗಮಂದಿರ ಶೇ 50 ರಷ್ಟು ಪ್ರೇಕ್ಷಕರೊಂದಿಗೆ ಕಾರ್ಯಾರಂಭಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಉನ್ನತ ಶಿಕ್ಷಣವನ್ನು 26 ರಿಂದ ಪ್ರಾರಂಭ ಮಾಡಲು ಅವಕಾಶ ನೀಡಲಾಯಿತು. ಕನಿಷ್ಠ ಒಂದು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಅವಕಾಶ ನೀಡಬೇಕೆಂಬ ಷರತ್ತಿಗೂ ನಿರ್ಧರಿಸಲಾಯಿತೆಂದು ಮೂಲಗಳು ತಿಳಿಸಿವೆ.