ಬೆಂಗಳೂರು: ಕೊರೋನಾ ಎರಡನೇ ಅಲೆ ಆತಂಕಕಾರಿ ರೀತಿಯಲ್ಲಿದ್ದು ಎಲ್ಲೆಲ್ಲೂ ಮರಣ ಮೃದಂಗ ಭಾರಿಸುತ್ತಿದೆ. ರಾಜ್ಯದ ಜನ ಕಂಗಾಲಾಗಿದ್ದು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೇ ವೇಳೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ರಾಜ್ಯ ಸರ್ಕಾರ ಏನು ಮಾಡಿದೆ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
https://mobile.twitter.com/siddaramaiah/status/1384062738696048642
ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ
ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ವ್ಯಂಗ್ಯವಾಡಿದ್ದಾರೆ.
https://mobile.twitter.com/siddaramaiah/status/1384062926042984453
ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ, ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ, ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ ಕೊರತೆ ಇದೆ ಎಂದು ಪರಿಸ್ತಿತಿಯತ್ತ ಬೊಟ್ಟು ಮಾಡಿರುವ ಸಿದ್ದರಾಮಯ್ಯ, ‘ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಸರ್ಕಾರ ಐ.ಸಿ.ಯು ನಲ್ಲಿದೆ’ ಎಂದು ವ್ಯಾಖ್ಯಾನಿಸಿದ್ದಾರೆ.
https://mobile.twitter.com/siddaramaiah/status/1384063330831138816
ವರ್ಷದ ಹಿಂದೆ ಮೊದಲ ಬಾರಿ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ ತನ್ನ ಭ್ರಷ್ಟತೆಗೆ ಬಳಸಿಕೊಂಡ ಬಿಜೆಪಿ ಸರ್ಕಾರ ಈಗ ಕೈಚೆಲ್ಲಿ ಕೂತಿದೆ ಎಂದು ಕಟು ಟೀಕೆ ಮಾಡಿದ್ದಾರೆ.
https://mobile.twitter.com/siddaramaiah/status/1384063625497743365
ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಸಿಎಂಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ವಿಶ್ಲೇಷಿಸಿದ್ದಾರೆ.
https://mobile.twitter.com/siddaramaiah/status/1384064003631030280