ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆಗಳು ಬಿರುಸುಗೊಂಡಿರುವಂತೆಯೇ ಬಿಜೆಪಿ ಹೈಕಮಾಂಡ್ ಬಗ್ಗೆ ಲಿಂಗಾಯತ ಸ್ವಾಮಿಗಳು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದರಿಂದ ಬಿಎಸ್‌ವೈ ಅವರಿಗೆ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರು, ತಮ್ಮ ಪರವಾಗಿ ಯಾರೂ ಪ್ರತಿಭಟನೆ ನಡೆಸಬಾರದೆಂದು ಟ್ವೀಟ್ ಮಾಡಿದ್ದಾರೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ— B.S.Yediyurappa (Modi Ka Parivar) (@BSYBJP) July 21, 2021