ಬೆಂಗಳೂರು: ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಸಚಿವರುಗಳಿಗ ಕರೆ ಮಾಡಿ ಪರಿಸ್ಥಿತಿ ಯ ಮಾಹಿತಿ ಪಡೆದುಕೊಂಡಿದ್ದಾರೆ. ಕೋವಿಡ್ ನಡುವೆಯು ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಏನೇ ತುರ್ತು ನೆರವು ಬೇಕಿದ್ರು ಸಂಬಂಧಪಟ್ಟ ಸಚಿವರುಗಳಿಗೆ ಅಥವ ನನಗೆ ನೇರವಾಗಿ ಕರೆ ಮಾಡುವಂತೆಯು ಅವರು ಸಲಹೆ ಮಾಡಿದ್ದಾರೆ.
ಈ ನಡುವೆ ಟ್ವೀಟ್ ಮಾಡಿ ಸಿಎಂ ಬಿಎಸ್ವೈ ಮಾಹಿತಿ ಹಂಚಿಕೊಂಡಿದ್ದಾರೆ. https://twitter.com/CMofKarnataka/status/1393790813105127428
ಚಂಡಮಾರುತದಿದಾಗಿ ಹಾನಿ ಸಂಭವಿಸಿದ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಿದ್ದು ತುರ್ತು ಪರಿಹಾರ ಕ್ರಮಕ್ಕೆ ಸಿಎಂ ಸೂಚಿಸಿರುವ ಹಿನ್ನೆಲೆಯಲ್ಲಿ. ಕರಾವಳಿ ಜಿಲ್ಲೆಗಳ ಅಧಿಕಾರಿಗಳು ಹೈ ಅಲರ್ಟ್ ಆಗಿ ಕಾರ್ಯೋನ್ಮುಖರಾಗಿದ್ದಾರೆ.