ಬೆಂಗಳೂರು: ಹಂತಕರ ಕೃತ್ಯಕ್ಕೆ ಬಲಿಯಾಗಿರುವ ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ಸರ್ಕಾರಿ ಸೇವೆಗೆ ಮರುನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ಹಂಚಿಕೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕಚೇರಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದಿರುವ ಮುಖ್ಯಮಂತ್ರಿಯವರು, ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
ಇದನ್ನು… pic.twitter.com/sg9tfsmacZ
— CM of Karnataka (@CMofKarnataka) May 27, 2023




















































