ಬೆಂಗಳೂರು: ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ದುಃಖ ಹಂಚಿಕೊಂಡಿದ್ದಾರೆ. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ ಎಂದವರು ಟ್ವೀಟ್ ಮಾಡದ್ದಾರೆ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q
— Siddaramaiah (@siddaramaiah) July 11, 2024