ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಜಂಟಿ ಕ್ರಿಯಾ ಸಮಿತಿ ತನ್ನ ನಿರ್ಧಾರವನ್ನು ಬದಲಾಯಿಸಿದೆ.
ಬೇಡಿಕೆಗಳ ಈಡೇರಿಕೆಗೆ ಒತಗತಾಯಿಸಿ ಡಿಸೆಂಬರ್ 31 ರಿಂದ ಸಾರಿಗೆ ಸಂಸ್ಥೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿತ್ತು. 38 ತಿಂಗಳ ಬಾಕಿ ಹಣ ಬಿಡುಗಡೆ ಮಾಡಬೇಕು ಹಾಗೂ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸಾರಿಗೆ ಇಲಾಖೆ ಹಾಗೂ ಸಾರಿಗೆ ನಿಗಮಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಮುಖರೊಂದಿಗೆ ಸಂಧಾನ ಸಭೆ ನಡೆಸಿದರು. ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮುಷ್ಕರವನ್ನು ಹಿಂಪಡೆದಿದೆ.
ಈ ಬೆಳವಣೆಗೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಎಂದಿನಂತೆ ಸಾರಿಗೆ ಸಂಸ್ಥೆಗಳ ಬಸ್ಗಳು ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.