ಉಡುಪಿ : ಲಾಕ್‌ಡೌನ್ ರೀತಿ ಕಠಿಣ ನಿಯಮ ಜಾರಿಯಲ್ಲಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ಸೋಂಕಿನ ಆತಂಕ ಇನ್ನೂಬದೂರವಾಗಿಲ್ಕ. ಹಾಗಾಗಿ ಹಳ್ಳಿಹಳ್ಳಿಗಳಲ್ಲಿ ಕಠಿಣ ನಿಯಮ ಜಾರಿಗೆ ಸರ್ಕಾರ ಕ್ರಮಕೈಗೊಂಡಿದೆ.
50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ.
ಸುಮಾಾರು 35 ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಜೂನ್ 2ರಿಂದ ಶಿರೂರು , ಜಡ್ಕಲ್ , ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, ಕಳತ್ತೂರು, ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ ಗ್ರಾಮಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ.