ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನ’ ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 140 ಎಕರೆ ಹಡಿಲು ಭೂಮಿಯಲ್ಲಿ ನಾಟಿ ಮಾಡಲಾಗಿದೆ. ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆ ತೆಗೆಯುವ ಕಾರ್ಯ ಗಮನಸೆಳೆಯಿತು. ಗುರುವಾರ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಸುಮಾರು 1500 ಎಕರೆ ಹಡಿಲು ಭೂಮಿಯ ಪುನರೋತ್ಥಾನ ಇಂದು ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದೆ.