ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಗೆ ಸುಗಮ ಅವಕಾಶ ಕಲ್ಪಿಸುವ ಅನಿವಾರ್ಯತೆ ಇದ್ದು, ಈ ಸಂಬಂಧ ಸೂಕ ಕ್ರಮವಿಡುವಂತೆ ಭರವಸೆಗಳ ಸಮಿತಿಯು ಅಧಿಕಾರಿಗಳಿಗೆ ಸಲಹೆ ಮಾಡಿದೆ.
ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಿತು.ಸ ಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ಸರ್ಕಾರಿ ಭರವಸೆಗಳ ಸಮೀತಿ ಸಭೆಯಲ್ಲಿ ಮರಳಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸಿದ ಶಾಸಕ ಕೆ ರಘುಪತಿ ಭಟ್ ಅವರು ಕರಾವಳಿ ಭಾಗದ ನಾನ್ ಸಿ.ಆರ್.ಝಡ್. ವ್ಯಾಪ್ತಿಗೆ ಪ್ರತ್ಯೇಕ ಮರಳು ನೀತಿ ರಚಿಸುವುದು, ಸಿ.ಆರ್.ಝಡ್. ವ್ಯಾಪ್ತಿಯಲ್ಲಿ ತಕ್ಷಣದಲ್ಲಿ ಮರಳುಗಾರಿಕೆ ಪ್ರಾರಂಭಿಸುವುದು ಹಾಗೂ ಮುಳುಗಿ ಮರಳು ತೆಗೆಯುವ ಸಾಂಪ್ರದಾಯಿಕ ಮರಳು ಪದ್ಧತಿಗೆ ಅವಕಾಶ ಕಲ್ಪಿಸುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ತಕ್ಷಣದಲ್ಲಿ ಈ ಎಲ್ಲಾ ಪ್ರಕ್ರಿಯೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಡಾ. ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, , ಕೆಐಎಡಿಬಿ ಸಿಇಒ ಆರ್. ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ., ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆರ್. ರವಿಕುಮಾರ್ ಸೇರಿದಂತೆ ಅನೇಕ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.