ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹಎಂದು ಪದ್ಮರಾಜ್ ಆರ್.ಪೂಜಾರಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರೀಯಾಂಕ ಖರ್ಗೆ ಅವರನ್ನು ಪದ್ಮರಾಜ್ ಅಭಿನಂಧಿಸಿದ್ದಾರೆ.
–